ಒಂದು ರಾಷ್ಟ್ರ, ಒಂದು ಚುನಾವಣೆ: ಸೆಪ್ಟೆಂಬರ್ 23 ರಂದು ಮೊದಲ ಸಭೆ

Prasthutha|

ಭುವನೇಶ್ವರ: ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ ನೇತೃತ್ವ ವಹಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಹೇಳಿದ್ದಾರೆ.

- Advertisement -


ಒಂದು ರಾಷ್ಟ್ರ, ಒಂದು ಚುನಾವಣೆ – ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 2 ರಂದು ಎಂಟು ಸದಸ್ಯರ ಸಮಿತಿ ರಚಿಸಿದೆ.