ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಪ್ರಧಾನಿ ಮೋದಿ

Prasthutha|

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

- Advertisement -


ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.


ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು.

- Advertisement -


ಬಳಿಕ ಮಾತನಾಡುತ್ತಾ, ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್ ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದರು.


2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ್ದ ಪ್ರಧಾನಿ, ಇದೀಗ ಅದನ್ನು ಶಾಶ್ವತವಾಗಿ ಸಮಾಧಿ ಮಾಡಲಾಗಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.



Join Whatsapp