ಅಂಕೋಲಾ: ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೆ 8 ಮೃತದೇಹಗಳು ಪತ್ತೆಯಾಗಿದೆ. ಅಲ್ಲದೆ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.
ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್‌ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ಹುಡುಕಾಟ ನಡೆಸುತ್ತಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ