Home ಟಾಪ್ ಸುದ್ದಿಗಳು ಭಾರತ್ ಜೋಡೋ ಯಾತ್ರೆಗೆ 1 ವರ್ಷ: ಯಾತ್ರೆ ನೆನಪಿಗಾಗಿ ಇಂದು ಸಿಎಂ-ಡಿಸಿಎಂ ಪಾದಯಾತ್ರೆ

ಭಾರತ್ ಜೋಡೋ ಯಾತ್ರೆಗೆ 1 ವರ್ಷ: ಯಾತ್ರೆ ನೆನಪಿಗಾಗಿ ಇಂದು ಸಿಎಂ-ಡಿಸಿಎಂ ಪಾದಯಾತ್ರೆ

ರಾಮನಗರ:  ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆ, ಅದರ ಸ್ಮರಣಾರ್ಥ ಕಾಂಗ್ರೆಸ್ ರಾಮನಗರದಲ್ಲಿ ಇಂದು ಅದ್ದೂರಿ ಕಾರ್ಯಕ್ರಮ ಆಯೋಜಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು‌ ಸಚಿವರು ಇಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಮನಗರ ಪಟ್ಟಣದ ಜಿಲ್ಲಾ ಕಚೇರಿಯಿಂದ ಐಜೂರು ಸರ್ಕಲ್ ವರೆಗೂ ಪಾದಯಾತ್ರೆ ನಡೆಯಲಿದ್ದು, ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಮನಗರ ಉಸ್ತುವಾರಿ ರಾಮಲಿಂಗಾರೆಡ್ಡಿ ಭಾಗವಹಿಸಲಿದ್ದಾರೆ.‌ ಜಿಲ್ಲೆಯ ಹಲವು ಕಡೆಗಳಿಂದ ಕೈ ಕಾರ್ಯಕರ್ತರು ಆಗಮಿಸಲಿದ್ದು ಸಂಜೆ 5 ಗಂಟೆಗೆ ಪಾದಯಾತ್ರೆ ಶುರುವಾಗಲಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೊಡೊ ಯಾತ್ರೆ ಕರ್ನಾಟಕದಲ್ಲಿ ಅಭೂತ ಪೂರ್ವ ಯಶಸ್ಸು ಸಿಕ್ಕ ನಂತರ ಕಾಂಗ್ರೆಸ್ ಯಾತ್ರೆಯ ಇನ್ನಷ್ಟು ಮೈಲೇಜ್ ಪಡೆದುಕೊಳ್ಳೋದಕ್ಕೆ ಮುಂದಾಗಿದೆ. ಇಂದು ರಾಮನಗರ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡುವ ಮುಖಾಂತರ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಚುನಾವಣೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಕ್ಕಾ ಪ್ಲ್ಯಾನ್ ಮಾಡಿದೆ. ಹೀಗಾಗಿ ಇಂದು ಸಂಜೆ ರಾಮನಗರಕ್ಕೆ ಬರಲಿರುವ ಸಿಎಂ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕಚೇರಿಯಿಂದ ಮೂರೂವರೆ ಕಿಮಿ ನಡೆದು ಐಜೂರು ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮುಖಾಂತರ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸರ್ವತಯಾರಿ ಮಾಡಿಕೊಂಡಿದೆ.

ಇನ್ನು ಈ ಕಾರ್ಯಕ್ರಮದಲ್ಲಿ 20 ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ. ಕಾಂಗ್ರೆಸ್​ನಿಂದ 224 ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು ಸಚಿವ ಸಂಪುಟ ಸಭೆ ಇರುವ ಹಿನ್ನೆಲೆ ನಾಳೆ(ಸೆ.08) ಇತರೆ ಜಿಲ್ಲೆಗಳಲ್ಲಿ ಜಾಥಾ ನಡೆಯಲಿದೆ. ಸಂಜೆ 5ರಿಂದ 7 ಗಂಟೆವರೆಗೂ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.

Join Whatsapp
Exit mobile version