Home ಟಾಪ್ ಸುದ್ದಿಗಳು ನಾಳೆಯಿಂದಲೇ ಗೃಹಲಕ್ಷ್ಮಿ ಯೋಜನೆಗೆ ಆನ್’ಲೈನ್ ಅರ್ಜಿ ಸಲ್ಲಿಕೆ ಆರಂಭ

ನಾಳೆಯಿಂದಲೇ ಗೃಹಲಕ್ಷ್ಮಿ ಯೋಜನೆಗೆ ಆನ್’ಲೈನ್ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ‘ಗೃಹಲಕ್ಷ್ಮಿ ಯೋಜನೆ’ಯ ಲಾಭ ಪಡೆಯಲು ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಈ ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕವನ್ನು ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ನೀಡಲಾಗುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ದಿಯನ್ನು ಖಚಿತ ಪಡಿಸಬಹುದು.


ಅರ್ಜಿಗಳನ್ನು ಆನ್ ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್ ಇಲ್ಲವೇ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

Join Whatsapp
Exit mobile version