ಬೀದರ್: ಆನ್ ಲೈನ್ ನಲ್ಲಿ ಮೋಸ ಹೋಗಿದ್ದಕ್ಕೆ ನೊಂದ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ್ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಇಸ್ಲಾಂಪುರ್ ದ ಆರತಿ ಕನಾಟೆ (28) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ.
ಮೃತ ಆರತಿ ಅವರು ಆನ್ ಲೈನ್ನಲ್ಲಿ ಹಣ ತೊಡಗಿಸಿ ಮಾಡಿ 2.5 ಲಕ್ಷ ರೂ. ಕಳೆದುಕೊಂಡಿದ್ದರು.
ಹಣ ವಾಪಸಾಗುವ ಯಾವುದೇ ಲಕ್ಷಣಗಳ ಕಂಡು ಬಾರದ ಹಿನ್ನೆಲೆಯಲ್ಲಿ ಮನನೊಂದು ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.