ಗ್ರಂಥಾಲಯಗಳಿಗೆ ಡಿವೈಸರ್ ಅಳವಡಿಸಿ ಮೊಬೈಲ್ ವಂಚಿತ ಮಕ್ಕಳಿಗೆ ಆನ್ ಲೈನ್ ಶಿಕ್ಷಣ : ಸುರೇಶ್ ಕುಮಾರ್

Prasthutha|

ಬೆಂಗಳೂರು : ರಾಜ್ಯದಲ್ಲಿರುವ 5 ಸಾವಿರದ 766 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ಟಿ.ವಿ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದ್ದಾರೆ.

- Advertisement -


ಬದಲಾದ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೂಲಕ ಆನ್‌ಲೈನ್ ಶಿಕ್ಷಣ ನೀಡಿಕೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.


ಮತ್ತೊಂದೆಡೆ, ಎಸ್ ಎಸ್ ಎಲ್‌ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಉಚ್ಚನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದು ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

Join Whatsapp