ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧ: ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

► 6 ತಿಂಗಳು ಜೈಲುಶಿಕ್ಷೆ, 10 ಸಾವಿರ ರೂ ದಂಡ

- Advertisement -

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕ ಮಂಡಿಸಿದರು. ಸಚಿವರು, ವಿಧೇಯಕ ವನ್ನು ಮಂಡಿಸಿ ಮಾತನಾಡುತ್ತಾ, ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದೊಂದು ಸರಕಾರದ ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು.

ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ. ಆನ್ ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

Join Whatsapp