ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಆನ್​ಲೈನ್​ ಮೂಲಕ ಆಹ್ವಾನ; ಇಲ್ಲಿದೆ ಮಾಹಿತಿ

Prasthutha|

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಈ ಬಾರಿ 68 ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.

- Advertisement -

 ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅ.01 ರಿಂದ ಅ.15 ರವರೆಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಕಳೆದ ವರ್ಷ 67 ಸಾಧಕರಿಗೆ ಪ್ರಶಸ್ತಿ ಪ್ರಧಾನ

- Advertisement -

ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆ ಕಾಯಿಯಂತೆ ಸಾಧನೆ ಮಾಡಿದ 67 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಅದರಲ್ಲಿ 10 ಸಂಘ-ಸಂಸ್ಥೆಗಳು, 2 ವಿಜ್ಞಾನ-ತಂತ್ರಜ್ಞಾನ, 3 ನ್ಯಾಯಾಂಗ, 2 ಕ್ರೀಡೆ, 5 ಸಾಹಿತ್ಯ, 2 ಶಿಕ್ಷಣ, 6 ಜಾನಪದ ಹೀಗೆ ಶಿಲ್ಪಕಲೆ, ಚಿತ್ರಕಲೆ, ಚಲನಚಿತ್ರ, ಸಂಗೀತ, ರಂಗಭೂಮಿ, ಸಮಾಜಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ಇನ್ನಿತರ ವಿವಿಧ ಕ್ಷೇತ್ರದ ಸಾಧಕರಿಗೆ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಶಸ್ತಿ ನೀಡಲಾಗಿತ್ತು.

ಸೇವಾ ಸಿಂಧು ಪೋರ್ಟಲ್​ ಮೂಲಕ ನಾಮನಿರ್ದೇಶನಕ್ಕೆ ಅವಕಾಶ

ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌  https://sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.



Join Whatsapp