Home ಟಾಪ್ ಸುದ್ದಿಗಳು ಕೋವಿಡ್ ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಿಲ್ಲ : ಕೇಂದ್ರ ಸ್ಪಷ್ಟನೆ

ಕೋವಿಡ್ ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಿಲ್ಲ : ಕೇಂದ್ರ ಸ್ಪಷ್ಟನೆ

ಹೊಸದಿಲ್ಲಿ: ಕೋವಿಡ್ ಲಸಿಕೆ ಪಡೆಯಲು ಪೂರ್ವ ನೋಂದಣಿ ಅಥವಾ ಆನ್ ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.


ಲಸಿಕೆ ಪಡೆಯುವಲ್ಲಿ ಗ್ರಾಮೀಣ ಪ್ರದೇಶದ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.
18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯೋಮಾನದವರು ನೇರವಾಗಿ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಹೋಗಿ ಅಲ್ಲಿ ಲಸಿಕೆ ಹಾಕಬಹುದು. ಸ್ಥಳದಲ್ಲೇ ನೋಂದಣಿ ಮಾಡಿ ಅಲ್ಲೇ ಲಸಿಕೆ ನೀಡುತ್ತಾರೆ ಎಂದು ಸರ್ಕಾರ ಹೇಳಿದೆ.

Join Whatsapp
Exit mobile version