ನವದೆಹಲಿ: ನಕ್ಸಲ್ ಪೀಡಿತ ಪ್ರದೇಶವಾದ ಛತ್ತೀಸಗಢದ ಬಸ್ತಾರ್ ಎಂಬಲ್ಲಿ ಗುಂಡು ಹಾರಿಸುವ ಮೂಲಕ ನಕ್ಸಲರ ಸಮಸ್ಯೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಅಭಿವೃದ್ಧಿಯೊಂದೇ ಏಕೈಕ ಮಾರ್ಗ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನಕ್ಸಲ್ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಎಡಪಂಥೀಯ ಭಯೋತ್ಪಾದನೆ ಪೀಡಿತ ಪ್ರದೇಶದಲ್ಲಿ ಮಕ್ಕಳಿಗಾಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ಪ್ರಾರಂಭ ಸೇರಿದಂತೆ ಅನೇಕ ಮೂಲಸೌಕರ್ಯ ವ್ಯವಸ್ಥೆಗೊಳಿಸುವ ಪ್ರಯತ್ನ ಸರ್ಕಾರ ನಿರ್ವಹಿಸಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ನಕ್ಸಲ್ ಸಮಸ್ಯೆಯ ಮೂಲ ಕಾರಣ ಮೊದಲು ತಪ್ಪಾಗಿ ಅರ್ಥೈಸಲಾಗಿದೆ ಅಥವಾ ನಿರ್ಲಕ್ಷಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು. ಬಂದೂಕು ಮತ್ತು ಗುಂಡುಗಳ ಮೂಲಕ ನಕ್ಸಲ್ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಸಾಂದರ್ಭಿಕವಾಗಿ ತಿಳಿಸಿದರು.
ಸರ್ಕಾರವು ಬಸ್ತಾರ್ ಜನತೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು.