ರಾಜ್ಯದಲ್ಲಿ ಪರಿಸರ ಸ್ನೇಹಿ ಪಟಾಕಿಗಳಿಗೆ ಮಾತ್ರ ಅವಕಾಶ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಚನೆ

Prasthutha|

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಲಿನ್ಯ ಹೆಚ್ಚಾಗದಂತೆ ತಡೆಯಲು ಅಂಗಡಿಗಳಲ್ಲಿ ಪರಿಸರ ಸ್ನೇಹಿ ಪಟಾಕಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಹಸಿರು ಪಟಾಕಿಯನ್ನು ಹೊರತು ಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿ ಶಾಮಾಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿಗೆ ಮಂಡಳಿಯಿಂದ ಸೂಚನೆ ಹೊರಡಿಸಲಾಗಿದೆ.

- Advertisement -

ಪಟಾಕಿಯಿಂದಾಗುವ ತ್ಯಾಜ್ಯವನ್ನು  ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ತಡೆಯಲು ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪಟಾಕಿ ಸ್ಟಾಲ್ ಗಳ ಮೇಲೆ ಕಣ್ಣಿಡಲು ಪೋಲಿಸ್ ಇಲಾಖೆಗೂ ಸೂಚನೆ ನೀಡಲಾಗಿದೆ.

ಅಲ್ಲದೆ, ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ  ಕಲ್ಪಿಸಿದ್ದು, ಪರಿಸರ ಸ್ನೇಹಿ ಪಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ  ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು ಎಂದು ಮಂಡಳಿ ತಿಳಿಸಿದೆ.

- Advertisement -

ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ  ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯದ ಪ್ರಮಾಣವನ್ನು  ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.



Join Whatsapp