ಮಂಗಳೂರು: ಕಾವೂರು ಮಹಾಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಸಂಘಪರಿವಾರ ಬ್ಯಾನರ್ ಹಾಕಿದ್ದು, ಬ್ಯಾನರ್ ತೆರವುಗೊಳಿಸುವಂತೆ ಒತ್ತಾಯ ಕೇಳಿಬಂದಿದೆ.
ಕಾವೂರು ಜಾತ್ರೆ ಶನಿವಾರದಿಂದ ಆರಂಭಗೊಳ್ಳಲಿದ್ದು, ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗದೆ.
ಬ್ಯಾನರ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದನ್ನು ತೆರವು ಮಾಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.