ಉಮ್ಮನ್ ಚಾಂಡಿ ನಿಧನ: ಕೇರಳದಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

Prasthutha|

ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕೇರಳದಲ್ಲಿ ಇಂದು(ಜು.18 ಮಂಗಳವಾರ) ಸಾರ್ವಜನಿಕ ರಜೆ ಘೋಷಿಸಲಾಗಿದೆ.

- Advertisement -

ಕೇರಳದಲ್ಲಿ ಇಂದು ಸರ್ಕಾರಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದು, ರಾಜ್ಯಾದ್ಯಂತ ಎರಡು ದಿನಗಳ ಕಾಲ ಅಧಿಕೃತ ಶೋಕಾಚರಣೆ ನಡೆಯಲಿದೆ.

ಇಂದು ನಡೆಯಲಿರುವ ಪಿಎಸ್‌ಸಿ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜ್ಯದಲ್ಲಿ ಇಂದು ಸಾರ್ವಜನಿಕ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಇಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ ಎಂದು ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ. ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

- Advertisement -

ತಾಂತ್ರಿಕ ವಿಶ್ವವಿದ್ಯಾಲಯವೂ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ಇಂದು ಮುಂಜಾನೆ 4.25ರ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಉಮ್ಮನ್ ಚಾಂಡಿ ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರ ಚಾಂಡಿ ಉಮ್ಮನ್ ಅವರು ಫೇಸ್ ಬುಕ್ ಪೋಸ್ಟ್ ಮೂಲಕ ತಂದೆಯ ಸಾವಿನ ಕುರಿತು ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಕೇರಳ ಕಾಂಗ್ರೆಸ್ ನಾಯಕರು ಬೆಂಗಳೂರಿಗೆ ದೌಡಾಯಿಸಿದ್ದಾರೆ.

Join Whatsapp