ದೇಶದ ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ರಾಹುಲ್ ಕರೆ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದೇಶದ ಪ್ರತಿ ಮೂಲೆಯಲ್ಲಿ ದ್ವೇಷವನ್ನು ಸೋಲಿಸಿ, ಪ್ರೀತಿಯ ಅಂಗಡಿಯನ್ನು ತೆರೆಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ಮಾಡಿರುವ ಅವರು, ‘ಇಂದು ಮೊದಲ ಹಂತದ ಮತದಾನ. ನೆನಪಿಡಿ, ನಿಮ್ಮ ಪ್ರತಿಯೊಂದು ಮತವೂ ಭಾರತದ ಪ್ರಜಾತಂತ್ರದ ಹಾಗೂ ಮುಂದಿನ ಪೀಳಿಗೆಯ ಭವಿಷ್ಯವನ್ನು ನಿರ್ಧರಿಸಲಿದೆ. ಕಳೆದ 10 ವರ್ಷಗಳಲ್ಲಿ ದೇಶದ ಆತ್ಮಕ್ಕೆ ಆಗಿರುವ ಗಾಯಗಳಿಗೆ ನಿಮ್ಮ ಮತದ ಬಾಮ್ ಹಚ್ಚಿ ಪ್ರಜಾಪ್ರಭುತ್ವವನ್ನು ಬಲಪಡಿಸಿ’ ಎಂದು ಬರೆದುಕೊಂಡಿದ್ದಾರೆ.

Join Whatsapp