Home ಟಾಪ್ ಸುದ್ದಿಗಳು ಲೋಕಸಮರಕ್ಕೆ ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿಕೆಶಿ

ಲೋಕಸಮರಕ್ಕೆ ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿಕೆಶಿ

ಬೆಂಗಳೂರು: ‘ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಬಗ್ಗೆ ನನಗೇನೂ ಗೊತ್ತಿಲ್ಲ. ಆದರೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಮತ ಗಳಿಕೆ ಪ್ರಮಾಣ ಹೆಚ್ಚಿಸಬೇಕಿದೆ. ಅದಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಬೇರೆ ಪಕ್ಷಗಳ ಕಾರ್ಯಕರ್ತರನ್ನು ಸೇರಿಸಿ ಕೊಳ್ಳುವಂತೆ ಸೂಚಿಸಿದ್ದೇನೆ. ಉಳಿದಂತೆ ಬೇರೆ ಯಾರದ್ದೇ ಪಕ್ಷ ಸೇರ್ಪಡೆ ವಿಚಾರ ನನಗೆ ತಿಳಿದಿಲ್ಲ’ ಎಂದರು.


‘ನಮಗೆ 135 ಶಾಸಕರ ಬಲ ಇದೆ. ಹೀಗಾಗಿ ಬೇರೆಯವರ ಜತೆ ಮಾತನಾಡುವ ಅಗತ್ಯ ಉದ್ಭವಿಸಿಲ್ಲ. ಎಲ್ಲ ಶಾಸಕರೂ ನನಗೆ ಪರಿಚಿತರು. ಬಿಜೆಪಿಯವರು ಯಾರ ಜತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಏಕೆ ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ’ ಎಂದು ಹೇಳಿದರು.

Join Whatsapp
Exit mobile version