ಆಪರೇಷನ್ ಕಮಲ ಪರಿಣಾಮ; ಸಂಕಷ್ಟಕ್ಕೆ ಸಿಲುಕಿದ ದೇಶದ ಸಂವಿಧಾನ: ಸಿದ್ದರಾಮಯ್ಯ

Prasthutha|

ಬೆಂಗಳೂರು: ‘ಪಕ್ಷಾಂತರದ ಪಿಡುಗಿನಿಂದಾಗಿ ದೇಶದ ಪ್ರಜಾಪ್ರಭುತ್ವ  ಮತ್ತು ಸಂವಿಧಾನ ಸಂಕಷ್ಟಕ್ಕೆ ಸಿಲುಕಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು,  ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಎರಡೂ ಅಪಾಯದಲ್ಲಿವೆ. ಅವುಗಳ ಉಳಿವಿಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಬೇಕಾದ ಅನಿವಾರ್ಯ ಇದೆ ಎಂದು ಹೇಳಿದರು.

ಗೋವಾದಲ್ಲಿ 11 ಕಾಂಗ್ರೆಸ್‌ ಶಾಸಕರ ಪೈಕಿ ವಿರೋಧ ಪಕ್ಷದ ನಾಯಕರೂ ಸೇರಿದಂತೆ ಎಂಟು ಮಂದಿ ಬಿಜೆಪಿ ಸೇರಲು ಹೊರಟಿದ್ದಾರೆ. 2008ರಲ್ಲಿ ಬಿಜೆಪಿ ಆರಂಭಿಸಿದ ‘ಆಪರೇಷನ್‌ ಕಮಲ’ ಈಗ ದೊಡ್ಡ ಪಿಡುಗಾಗಿ ಬೆಳೆದಿದೆ. ಪಕ್ಷಾಂತರ ಮಾಡುವವರು 10 ವರ್ಷ ಚುನಾವಣೆಗೆ ಸ್ಪರ್ಧಿಸುವುದನ್ನು ನಿಷೇಧಿಸುವುದಕ್ಕೆ ಪೂರಕವಾಗಿ ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು’  ಎಂದು ಹೇಳಿದರು.

- Advertisement -

ವಿಧಾನ ಪರಿಷತ್‌ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಮಾತನಾಡಿದರು. ಮಾಜಿ ಸಚಿವ ಅಂಜನಮೂರ್ತಿ, ವಿಧಾನ ಪರಿಷತ್‌ ನ ಮಾಜಿ ಸದಸ್ಯ ಡಾ.ಎಂ.ಪಿ. ನಾಡಗೌಡ, ಎಂ.ಪಿ. ಪ್ರಕಾಶ್‌ ಅವರ ಪತ್ನಿ ರುದ್ರಾಂಬ, ಮಕ್ಕಳಾದ ಸುಮಾ ವಿಜಯ್‌, ವೀಣಾ ಮಹಾಂತೇಶ್‌ ಉಪಸ್ಥಿತರಿದ್ದರು.



Join Whatsapp