ನವದೆಹಲಿ: ಭಾರತವು ಪಾಕಿಸ್ತಾನದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 24 ಸ್ಥಳಗಳ ಮೇಲೆ ಪರಿಣಾಮ ಬೀರಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 22 ಜನರು ಗಾಯಗೊಂಡಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳು ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ದಾಳಿ ನಡೆಸಿವೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪಾಕಿಸ್ತಾನದಲ್ಲಿ ಉಗ್ರರ 9 ಶಿಬಿರಗಳನ್ನು ಗುರಿಯಾಗಿಸಿಕೊಂಡು ನಿಖರ ದಾಳಿ ನಡೆದಿದೆ, ನಮ್ಮ ಸೇನೆ ಉಗ್ರರ ಮೂಲಸೌಲಭ್ಯಗಳನ್ನು ನೆಲಸಮ ಮಾಡುವಲ್ಲಿ ಯಶಸ್ವಿಯಾಗಿದೆ. ಆದ್ರೆ ಯಾವುದೇ ನಾಗರಿಕ ಸ್ಥಳಗಳು, ಆರ್ಥಿಕ ಕಟ್ಟಡಗಳು ಮತ್ತು ಸೇನಾ ನೆಲೆಗಳ ಮೇಲೆ ದಾಳಿ ಮಾಡಿಲ್ಲವೆಂದು ಸ್ಪಷ್ಟಪಡಿಸಿದೆ.
