Home ಟಾಪ್ ಸುದ್ದಿಗಳು ಆಪರೇಷನ್​ ಸಿಂಧೂರ: ಜಮ್ಮು–ಕಾಶ್ಮೀರದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಆಪರೇಷನ್​ ಸಿಂಧೂರ: ಜಮ್ಮು–ಕಾಶ್ಮೀರದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

0

ಶ್ರೀನಗರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ.

ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಜಮ್ಮು, ಸಾಂಬಾ, ಕಥುವಾ, ರಜೌರಿ ಮತ್ತು ಪೂಂಚ್‌ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಎ ವರದಿ ಮಾಡಿದೆ.

ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.

NO COMMENTS

LEAVE A REPLY

Please enter your comment!
Please enter your name here

Exit mobile version