ಸಂಸತ್ ನಲ್ಲಿ ಮಾತನಾಡಲು ಅವಕಾಶ ನೀಡದ ಸರ್ಕಾರದ ವಿರುದ್ಧ ಪಾರ್ಲಿಮೆಂಟ್ ಚಲೋ

Prasthutha|

ನವದೆಹಲಿ: ವಿರೋಧ ಪಕ್ಷಗಳ ಧ್ವನಿಗಳನ್ನು ಅಡಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸಂಸದರು ಗುರುವಾರ ಪಾರ್ಲಿಮೆಂಟ್ ಮಾರ್ಚ್ ನಡೆಸಿದರು. ನಿನ್ನೆಯಷ್ಟೇ ಸಂಸತ್ ನ ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದವು. ಅಧಿವೇಶನದಲ್ಲಿ ಪೆಗಾಸಸ್, ರೈತರ ಪ್ರತಿಭಟನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಉದ್ದೇಶಪೂರ್ವಕವಾಗಿ ಅವಕಾಶ ನೀಡಿಲ್ಲ ಎಂದು ವಿಪಕ್ಷ ನಾಯಕರು ಆರೋಪಿಸಿದರು.

- Advertisement -


ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್ ಅಧಿವೇಶನ ಮುಗಿಸಲಾಗಿದೆ. ಆದರೆ ಭಾರತದ ಶೇಕಡಾ 60ರಷ್ಟು ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ ಮತ್ತು ಅವಮಾನಿಸಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.


ನಾವು ಪೆಗಾಸಸ್ ಸಮಸ್ಯೆಯನ್ನು ಪ್ರಸ್ತಾಪಿಸಿದೆವು, ಆದರೆ ಸರ್ಕಾರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾವು ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿದೆವು. ಅದಕ್ಕೂ ಅವಕಾಶ ನೀಡಲಿಲ್ಲ. ಆದ್ದರಿಂದ ನಾವು ಸಂಸತ್ ನ ಹೊರಗೆ ಬೆಲೆ ಏರಿಕೆ, ರೈತರ ಸಮಸ್ಯೆಯನ್ನು ಪ್ರಸ್ತಾಪಿಸಿದೆವು. ಸರ್ಕಾರದ ನಡೆ ಪ್ರಜಾಪ್ರಭುತ್ವದ ಕೊಲೆ ಹೊರತು ಬೇರೇನಲ್ಲ ಎಂದು ರಾಹುಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



Join Whatsapp