ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದಿಂದಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -


ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಾದ ಬಗ್ಗೆ ವರದಿಯಾಗಿದೆ. ತಮ್ಮ ವೈಯಕ್ತಿಕ ವೈದ್ಯರ ಸಲಹೆಯಂತೆ ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಬಗ್ಗೆ ಮೂಲಗಳು ತಿಳಿಸಿವೆ.


ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ವರುಣಾ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯ ಕೇಳಿಬಂದಿದೆ. ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಸಿದ್ದು ಇನ್ನೂ ನಿರ್ಧಾರ ಕೈಗೊಂಡಿಲ್ಲ.

Join Whatsapp