Home ಟಾಪ್ ಸುದ್ದಿಗಳು ನಾಳೆ ಖುದ್ದು ಕೋರ್ಟ್ ಗೆ ಹಾಜರಾಗಲು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್

ನಾಳೆ ಖುದ್ದು ಕೋರ್ಟ್ ಗೆ ಹಾಜರಾಗಲು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಕಾನೂನು ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮೇ.24ರಂದು ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9ರಂದು ಕನಕಪುರದಲ್ಲಿ ಪಾದಯಾತ್ರೆ ಆರಂಭಿಸಿದ್ದರು. ನ್ಯಾಯಾಲಯದ ಆಕ್ಷೇಪ ಹಾಗೂ ರಾಜ್ಯ ಸರ್ಕಾರದ ವಿರೋಧದ ಹಿನ್ನೆಲೆ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಎರಡು ಹಂತದಲ್ಲಿ ನಡೆಸಿದ್ದರು.
ಪಾದಯಾತ್ರೆ ಸಂದರ್ಭ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಇದೀಗ ಇವುಗಳ ವಿಚಾರಣೆಯನ್ನು ಆರಂಭಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ

Join Whatsapp
Exit mobile version