ಬೆಂಗಳೂರು: ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಾಳೆ ಪ್ರತಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನನ್ನೂ ಸೇರಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದಾರೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.
ಪಕ್ಷ ಯಾರಿಗೇ ಅವಕಾಶ ನೀಡಿದರೂ ನಾನು ಸ್ವಾಗತ ಮಾಡುತ್ತೇನೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡುತ್ತೇನೆ ಎಂದರು.
”ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೋ ಅವರಿಗೆ ಒಲಿಯುತ್ತದೆ. ನಾವಂತೂ ಅರ್ಜಿ ಹಾಕಿಲ್ಲ. ಅರ್ಜಿ ಹಾಕುವ ಸಂಸ್ಕೃತಿಯೂ ನಮ್ಮಲ್ಲಿ ಇಲ್ಲ ಎಂದರು.