ಬೆಂಗಳೂರು: ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆ ಕರೆದು, ಶಾಸಕರ ಅಭಿಪ್ರಾಯ ಪಡೆದು ವಿರೋಧ ಪಕ್ಷದ ನಾಯಕರು ಯಾರಗಬೇಕೆಂದು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
2024 ರ ಲೋಕಸಭಾ ಚುನಾವಣೆ ಬಹಳ ಸವಾಲಿನಿಂದ ಕೂಡಿದೆ. ಹೆಚ್ಚು ಸ್ಥಾನ ಗೆಲ್ಲಿಸುವಲ್ಲಿ ಶ್ರಮ ವಹಿಸುತ್ತೇನೆ. ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪನವರ ಮಗ ಎಂದು ಹೇಳಲು ನನಗೆ ಹೆಮ್ಮೆ ಇದೆ ಎಂದು ಹೇಳಿದರು.