Home ಟಾಪ್ ಸುದ್ದಿಗಳು ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು: ಯತ್ನಾಳ್

ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು: ಯತ್ನಾಳ್

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ನೇಮಕಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಆಕ್ರೋಶ ಹೊರಹಾಕಿದ್ದಾರೆ
ಹೈಕಮಾಂಡ್ ವೀಕ್ಷಕರ ಬಳಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೇಳಿದ್ದೇನೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಿ ನನ್ನ ಅಭಿಪ್ರಾಯ ಹೇಳುತ್ತೇನೆ. ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು. ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಯತ್ನಾಳ್ ಹೇಳಿದ್ದಾರೆ.


ಬಿಜೆಪಿಯಲ್ಲಿ ದಕ್ಷಿಣ ಕರ್ನಾಟಕದವರೇ ವಿಪಕ್ಷ ನಾಯಕರು ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾಟಕದ ಎಷ್ಟು ಶಾಸಕರು ಇದ್ದಾರೆ? ಬಹಳಷ್ಟು ಶಾಸಕರು ನಮ್ಮ ಜೊತೆಗಿದ್ದಾರೆ, ಆದರೆ ಮಾತಾಡಲು ಧಮ್ ಇಲ್ಲ. ಬಹಳಷ್ಟು ಶಾಸಕರು ಮಕ್ಕಳನ್ನು ಲೋಕಸಭೆಗೆ ನಿಲ್ಲಿಸಬೇಕು ಅಂತಿದ್ದಾರೆ. ಉತ್ತರ ಕರ್ನಾಟಕಕ್ಕೆ ಅವಕಾಶ ಕೊಡದಿದ್ರೆ ಜನ ತೀರ್ಮಾನ ಮಾಡ್ತಾರೆ. ಆಗ ನಾವೂ ತೀರ್ಮಾನ ಮಾಡ್ತೇವೆ ಎಂದು ಶಾಸಕ ಬಸನಗೌಡ ಯತ್ನಾಳ್ ಕಿಡಿಕಾರಿದ್ದಾರೆ.

Join Whatsapp
Exit mobile version