Home ಟಾಪ್ ಸುದ್ದಿಗಳು 12 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ಒತ್ತಾಯಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ

12 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯಲು ಒತ್ತಾಯಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ

ನವದೆಹಲಿ: 12 ರಾಜ್ಯಸಭಾ ಸಂಸದರ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಮುಖಂಡರು ಮಂಗಳವಾರ ಸಂಸತ್ತಿನಿಂದ ವಿಜಯ್ ಚೌಕ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಸಭಾಂಗಣದಲ್ಲಿ ಸಭೆ ಸೇರಿದ ವಿವಿಧ ಪಕ್ಷಗಳ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದರು.

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ವಿರೋಧ ಪಕ್ಷದ ಮುಖಂಡ ಬೆಂಬಲ ಸೂಚಿಸಿದರು.

ಕಳೆದ ಆಗಸ್ಟ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಅಶಿಸ್ತಿನ ವರ್ತನೆಗಾಗಿ ನವೆಂಬರ್ 29 ರಂದು 12 ಪ್ರತಿಪಕ್ಷ ಸಂಸದರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp
Exit mobile version