ಇಂಧನ ಬೆಲೆ ಏರಿಕೆ ಖಂಡಿಸಿ ಲೋಕಸಭೆ ಕಲಾಪ ಬಹಿಷ್ಕರಿಸಿದ ಪ್ರತಿಪಕ್ಷ ಸದಸ್ಯರು

Prasthutha|

ನವದೆಹಲಿ: ಐದು ರಾಜ್ಯಗಳ ಚುನಾವಣೆ ಮುಗಿದ 137 ದಿನಗಳ ವಿರಾಮದ ನಂತರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ಶುಕ್ರವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಕಲಾಪ ಬಹಿಷ್ಕರಿಸಿದರು.

- Advertisement -

ಗೌರವ್ ಗೊಗೊಯ್ (ಕಾಂಗ್ರೆಸ್) ಶೂನ್ಯ ವೇಳೆಯಲ್ಲಿ ಇಂಧನ ಬೆಲೆಗಳ ಏರಿಕೆಯ ವಿಷಯವನ್ನು ಪ್ರಸ್ತಾಪಿಸಿದರು, ಹಣದುಬ್ಬರ ಮತ್ತು ಕೊರೊನಾವೈರಸ್ ಸಾಂಕ್ರಾಮಿಕದ ನಂತರ ಜನರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.  ಇಷ್ಟರಲ್ಲೇ  ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿ ಅವರ ಬದುಕನ್ನು ಸಂಕಷ್ಟಮಯಗೊಳಿಸಿದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್, ಡಿಎಂಕೆ, ಎನ್ ಸಿಪಿ, ಎಡಪಕ್ಷಗಳು, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಐಯುಎಂಎಲ್ ಸೇರಿದಂತೆ ಇತರ ಪಕ್ಷಗಳ ಸದಸ್ಯರು ಈ ವಿಷಯದ ಬಗ್ಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಕಲಾಪ ಬಹಿಷ್ಕರಿಸಿದರು.

Join Whatsapp