ನವದೆಹಲಿ: ಬಿಜೆಪಿ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು. ಕೇಸರಿ ಪಕ್ಷಕ್ಕೆ ಕೌಂಟರ್ ಕೊಡಲೆಂದೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್ಸಿಪಿ ಒಟ್ಟಾಗಿದ್ದೇವೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಸಂಸತ್ತಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶರದ್ ಪವಾರ್ ಭೇಟಿ ಮಾಡಿದರು. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೂ ಕಾರಣವಾಗಿತ್ತು. ಪ್ರಧಾನಿ ಭೇಟಿಯಾದ ನಂತರ ಮಾತನಾಡಿದ ಎನ್ ಸಿಪಿ ವರಿಷ್ಠ ಪವಾರ್, ಶಿವಸೇನೆ ಸಂಸದ ಸಂಜಯ್ ರಾವುತ್ ಅವರಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ ವಿಷಯದ ಬಗ್ಗೆ ಪ್ರಧಾನಿ ಗಮನ ಸೆಳೆದಿದ್ದೇನೆ ಎಂದು ಹೇಳಿದರು. ರಾವುತ್ ವಿರುದ್ಧ ಇಂತಹ ಕ್ರಮ ಕೈಗೊಳ್ಳಲು ಯಾವುದೇ ಕಾರಣವಿಲ್ಲ. ಆದರೆ, ಕೇಂದ್ರದ ಏಜೆನ್ಸಿಯೇ ಈ ಕ್ರಮ ತೆಗೆದುಕೊಂಡಿರುವ ಕಾರಣ ಇದರ ಹೊಣೆಯನ್ನೂ ಕೇಂದ್ರ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಕಿಡಿಕಾರಿದರು.
ಬಿಜೆಪಿ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು. ಕೇಸರಿ ಪಕ್ಷಕ್ಕೆ ಕೌಂಟರ್ ಕೊಡಲೆಂದೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್ಸಿಪಿ ಒಟ್ಟಾಗಿದ್ದೇವೆ. ಅಲ್ಲದೇ, ಬಿಜೆಪಿ ಜೊತೆಗೆ ಎನ್ಸಿಪಿ ಏನು ಮಾಡಬೇಕಾಗಿಲ್ಲ ಎಂದು ತಿಳಿಸಿದರು.