Home ಟಾಪ್ ಸುದ್ದಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧಪಕ್ಷಗಳ ಸಭೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧಪಕ್ಷಗಳ ಸಭೆ

ಪಟ್ನಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ವಿರೋಧಪಕ್ಷಗಳ ನಾಯಕರ ಚಿಂತನ ಶಿಬಿರವು ಶುಕ್ರವಾರ ಪಟ್ನಾದಲ್ಲಿ ನಡೆಯಲಿದೆ.


ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಆಯೋಜಿಸುತ್ತಿರುವ ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ, ಎಎಪಿಯ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಉದ್ಧವ ಠಾಕ್ರೆ, ಎನ್ಸಿಪಿ ನಾಯಕ ಶರದ್ ಪವಾರ್ ಹಾಗೂ ಇತರ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸುವ ತಂತ್ರ ರೂಪಿಸಲಷ್ಟೇ ಸಭೆಯಲ್ಲಿ ಆದ್ಯತೆ ನೀಡಲಾಗುತ್ತಿದೆ.

Join Whatsapp
Exit mobile version