ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿ ಎಲ್ಲಾ ವಿರೋಧ ಪಕ್ಷಗಳು ರಾಜ್ಯಸಭೆಯ ಸಭಾಪತಿಗೆ ಪತ್ರವನ್ನು ಸಲ್ಲಿಸಿವೆ.
ಅತ್ಯಂತ ಹಿರಿಯ ನಾಯಕನಿಗೆ ತೋರಿದ ಈ ಉದ್ದೇಶಪೂರ್ವಕ ಅಗೌರವದ ಬಗ್ಗೆ ನಮಗೆ ಅಘಾತವಾಗಿದೆ. ಅವರಿಗೆ ನೀಡಬೇಕಾದ ಶಿಷ್ಟಾಚಾರ ಸೌಜನ್ಯಗಳನ್ನು ಪಾಲಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಮುಂಗಾರು ಅಧಿವೇಶನದ ಕಾರ್ಯಕಲಾಪಗಳು ಪ್ರಾರಂಭವಾಗುವ ಮೊದಲು, ದ್ರೌಪದಿ ಮುರ್ಮು ಭಾರತದ 15 ನೇ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.