ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆಡಳಿತ ಮಂಡಳಿ ರಚಿಸಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಆದೇಶದಲ್ಲಿ ಒಂದು ಸಮುದಾಯವನ್ನು ಕಡೆಗಣಿಸಲಾಗಿದೆ. ಎರಡು ಸಮುದಾಯದವರು ಒಳಗೊಂಡಂತೆ ಎಂಟು ಜನ ಇರಬೇಕಿತ್ತು. ಒಂದೇ ಸಮುದಾಯದ ಏಳು ಜನರಿದ್ದಾರೆ, ಈ ಸಮಿತಿ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಆಡಳಿತ ಮಂಡಳಿ ರಚನೆಗೆ ಕೋಮು ಸೌಹಾರ್ದ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
ಕೋಮು ಸೌಹಾರ್ದ ವೇದಿಕೆಯ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್ ವಿರೋಧ ಸೂಚಿಸಿದ್ದು, ಸಮಿತಿಯನ್ನು ವಿಸರ್ಜಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.