Home ಕರಾವಳಿ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಗೆ ವಿರೋಧ: ಎರಡು ದಿನ ಕಾಲೇಜಿಗೆ ರಜೆ !

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಗೆ ವಿರೋಧ: ಎರಡು ದಿನ ಕಾಲೇಜಿಗೆ ರಜೆ !

ಉಡುಪಿ:  ಶಿರವಸ್ತ್ರ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಿಸಿರುವ ಘಟನೆ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ನಡೆದಿದ್ದು, ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಎರಡು ದಿನ ಕಾಲೇಜಿಗೆ ರಜೆ ಘೋಷಿಸಿದ್ದಾರೆ.

ಗುರುವಾರ ಎಂದಿನಂತೆ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದಿದ್ದು, ಪ್ರಾಂಶುಪಾಲರು ಹಿಜಾಬ್ ತೆಗೆದು ಬನ್ನಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಕಾಲೇಜ್ ಆವರಣದಲ್ಲೇ ಪ್ರತಿಭಟನೆ ಮಾಡಿದ್ದಾರೆ.

 ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಪ್ರಾಂಶುಪಾಲರು ಕಾಲೇಜಿಗೆ ರಜೆ ಘೋಷಿಸಿದ್ದಾರೆ.

Join Whatsapp
Exit mobile version