ಭೂಸ್ವಾಧೀನಕ್ಕೆ ವಿರೋಧ: ರೈತರು, ಮಹಿಳೆಯರ ಮೇಲೆ ಪೊಲೀಸರ ದಬ್ಬಾಳಿಕೆ

Prasthutha|

ಬೆಳಗಾವಿ: ಭೂಸ್ವಾಧೀನ ವಿರೋಧಿಸಿ ನೂರಾರು ರೈತರಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸರು ರೈತರ ಮೇಲೆ ದಬ್ಬಾಳಿಕೆ ನಡೆಸಿ ಮಹಿಳೆಯರನ್ನು ಎಳೆದಾಡಿ ಸೀರೆ ಹರಿದು ಅಮಾನವೀಯವಾಗಿ ವರ್ತಿಸಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ.

- Advertisement -


ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಸರ್ವೆ ಆದ ಜಮೀನು ಬಿಟ್ಟು ಬೇರೆ ಜಮೀನು ತೆಗೆದುಕೊಂಡಿದ್ದಕ್ಕೆ ವಿರೋಧಿಸಿದ್ದರು. ಫಲವತ್ತಾದ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ ಏಕಾಏಕಿ ನೂರಾರು ಪೊಲೀಸರನ್ನು ಕರೆತಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಮಗಾರಿ ನಡೆಸಿದೆ.


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಜೀವ ಕೊಟ್ಟೇವು ಜಮೀನು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೈಯಲ್ಲಿ ಕುಡುಗೋಲು ಹಿಡಿದು ರೈತರು ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ಮಹಿಳೆಯರನ್ನು ಎಳೆದಾಡಿ ಸೀರೆ ಹರಿದು ಹಾಕಿದ ಘಟನೆ ಸ್ಥಳದಲ್ಲಿ ನಡೆದಿದೆ.

- Advertisement -


ಸ್ಥಳಕ್ಕೆ ಡಿಸಿಪಿ ವಿಕ್ರಂ ಆಮಟೆ, ಎಸಿ ರವೀಂದ್ರ ಕರಲಿಂಗನವರ್ ಭೇಟಿ ನೀಡಿದ್ದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.



Join Whatsapp