ಸೆ 26ರವರೆಗೂ ಮಳೆ ಸಾಧ್ಯತೆ | ದ.ಕ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕೊಂಡಿರುವ ಪರಿಣಾಮ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅದರಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ.

- Advertisement -

ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, , ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನೆರೆಯ ಉತ್ತರಪ್ರದೇಶ, ರಾಜಸ್ಥಾನ, ಒರಿಸ್ಸಾ, ಮಧ್ಯಪ್ರದೇಶ, ತ್ರಿಪುರಾ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿಯೂ ವಿಪರೀತ ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp