Home ಟಾಪ್ ಸುದ್ದಿಗಳು ಸೆ 26ರವರೆಗೂ ಮಳೆ ಸಾಧ್ಯತೆ | ದ.ಕ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್...

ಸೆ 26ರವರೆಗೂ ಮಳೆ ಸಾಧ್ಯತೆ | ದ.ಕ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕೊಂಡಿರುವ ಪರಿಣಾಮ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅದರಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, , ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನೆರೆಯ ಉತ್ತರಪ್ರದೇಶ, ರಾಜಸ್ಥಾನ, ಒರಿಸ್ಸಾ, ಮಧ್ಯಪ್ರದೇಶ, ತ್ರಿಪುರಾ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿಯೂ ವಿಪರೀತ ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp
Exit mobile version