Home ಟಾಪ್ ಸುದ್ದಿಗಳು ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಜೂ.25, 26ರಂದು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.


ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ತಿಳಿಸಿದೆ.


ದ.ಕ.ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸಹಿತ ಹಲವಡೆ ಸೋಮವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬಳಿಕ ಮೋಡಕವಿದ ವಾತಾವರಣ ಕಂಡುಬಂದಿದೆ. ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗಿದೆ.

Join Whatsapp
Exit mobile version