ದ.ಕ. ಜಿಲ್ಲೆಯಲ್ಲಿ ಮೇ 19, 20ರಂದು ಆರೆಂಜ್ ಅಲರ್ಟ್ ಘೋಷಣೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 19 ಮತ್ತು 20 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಸೂಚಿಸಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

- Advertisement -

ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ 6.45 ಸೆಂ.ಮೀ.ನಿಂದ 11.55 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Join Whatsapp