ಶಿವಕುಮಾರ್ ವಿರುದ್ಧದ ತನಿಖೆಗೆ ಸ್ಪೀಕರ್ ಅನುಮತಿ ಪಡೆಯದೇ ಆದೇಶಿಸಿದ್ದು ಕಾನೂನು ಬಾಹಿರ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಬಿಜೆಪಿ‌ ಅಧಿಕಾರದಲ್ಲಿರುವಾಗ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯವನ್ನು ಕೂಡ ಪರಿಗಣಿಸಲಿಲ್ಲ. ಹೀಗೆ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮ ಉರಗ ತಿಳಿಸಿದ್ದಾರೆ.

- Advertisement -

ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಇವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನ ಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕಿತ್ತು. ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿಲ್ಲ ಹಾಗೂ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸಿರಲಿಲ್ಲ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನಿನ ರೀತ್ಯ ಸರಿಯಲ್ಲ ಎಂದರು.

- Advertisement -

ನ್ಯಾಯಾಲಯದ ತೀರ್ಮಾನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನುಬಾಹಿರವಾಗಿ ತನಿಖೆಗೆ ಆದೇಶ ನೀಡಿರುವುದರಿಂದ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿರುವುದಾಗಿ ಸಿಎಂ ತಿಳಿಸಿದರು.

ನಿರ್ಭಯ ನಿಧಿ ಅಡಿ ಬೆಂಗಳರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಈ ಯೋಜನೆಗೆ 661.5 ಕೋಟಿ ರೂ. ಖರ್ಚಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಶೇ.60 ಹಾಗೂ ರಾಜ್ಯಸರ್ಕಾರದ ಶೇ. 40 ರಷ್ಟು ಅನುದಾನ ಇದೆ. ಬೆಂಗಳೂರು ನಗರದ ಜನರಿಗೆ ಸುರಕ್ಷತೆಯನ್ನು ಈ ಕೇಂದ್ರ ಕಲ್ಪಿಸಲಿದೆ. ಮಹಿಳೆಯರು, ಅಂಗವಿಕಲರು, ವಯೋವೃದ್ಧರಿಗೆ ಯಾವುದೇ ತೊಂದರೆ ಸಂಭವಿಸಿದರೂ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸರು 7 ನಿಮಿಷದೊಳಗೆ ಆಗಮಿಸಿ, ತೊಂದರೆಯಲ್ಲಿರುವ ಜನರಿಗೆ ನೆರವು ನೀಡಲಿದೆ. ದೇಶದ 8 ಸ್ಥಳಗಳಲ್ಲಿ ಈ ಕೇಂದ್ರಕ್ಕೆ ಮಂಜೂರಾತಿ ನೀಡಿದ್ದರೂ, ಬೆಂಗಳೂರಿನಲ್ಲಿ ಮಾತ್ರ ಸೇಫ್ ಸಿಟಿ ಕಮಾಂಡ್ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸಲಾಗಿದೆ ಎಂದರು.

Join Whatsapp