Home ಟಾಪ್ ಸುದ್ದಿಗಳು 3,500 ಪೊಲೀಸರ ನೇಮಕಕ್ಕೆ ಒಂದು ವಾರದಲ್ಲಿ ಆದೇಶ: ಗೃಹ ಸಚಿವ ಜಿ ಪರಮೇಶ್ವರ್

3,500 ಪೊಲೀಸರ ನೇಮಕಕ್ಕೆ ಒಂದು ವಾರದಲ್ಲಿ ಆದೇಶ: ಗೃಹ ಸಚಿವ ಜಿ ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.


ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂ. ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದರು.

Join Whatsapp
Exit mobile version