ಮೆದುಳು ನಿಷ್ಕ್ರಿಯವಾಗಿರುವ ಯುವತಿಯಿಂದ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ನರ್ಸ್

Prasthutha|

ಚಿಕ್ಕಮಗಳೂರು: ಮೆದುಳು ನಿಷ್ಕ್ರಿಯವಾಗಿರುವ ನರ್ಸ್ ಅಂಗಾಂಗ ದಾನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕೆರೆಮನೆಯಲ್ಲಿ ನಡೆದಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕೆರೆಮನೆಯ ಗಾನವಿ ಸಾವಿನಲ್ಲೂ ಸಾರ್ಥಕತೆ ಮೆರೆದ ನರ್ಸ್. ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಗಾನವಿ. ಫೆಬ್ರವರಿ 8ರಂದು ಕೆಲಸ ಮಾಡುವಾಗ ಕುಸಿದುಬಿದ್ದು ಜ್ಞಾನ ತಪ್ಪಿದರು. ಫೆಬ್ರವರಿ 12ರವರೆಗೆ ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಹೀಗಾಗಿ ಮೆದುಳು ನಿಷ್ಕ್ರಿಯವಾಗಿರುವುದನ್ನು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಗಾನವಿಯ ಯಕೃತ್, 2 ಕಿಡ್ನಿ, ಹೃದಯನಾಳಗಳು, 2 ಕಾರ್ನಿಯಾ ದಾನ ಮಾಡಿದ್ದಾರೆ. ಕುಟುಂಬಸ್ಥರ ಈ ನಿರ್ಧಾರಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್​ ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



Join Whatsapp