ಅಂಗಾಂಗ ದಾನ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

►ವಿಶ್ವ ಅಂಗಾಂಗ ದಾನ ದಿನಾಚರಣೆ

- Advertisement -

ಬೆಂಗಳೂರು: ಅಂಗಾಂಗ ದಾನ ಮಾನವೀಯತೆಯ ಕೆಲಸ. ಅಂಗಾಂಗಗಳನ್ನು ದಾನಕ್ಕೆ ಸಂಕಲ್ಪ ಮಾಡುವ ಮುಖಾಂತರ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

- Advertisement -

ವಿಜ್ಞಾನಿಗಳ , ವೈದ್ಯರ ಪರಿಶ್ರಮದಿಂದ ನಮ್ಮ ಸಾವಿನ ನಂತರ ಅಂಗಾಂಗಗಳನ್ನು ನೀಡುವ ಮೂಲಕ ಇತರರ ಜೀವವನ್ನು ಬದುಕಿಸಬಹುದಾಗಿದೆ. ಒಬ್ಬ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮ ದಿಂದ ಹಿಡಿದು ಎಲ್ಲ ಅಂಗಗಳನ್ನು  ದಾನ ಮಾಡಬಹುದು. ಸ್ವಾಮಿ ವಿವೇಕಾನಂದರು ಹೇಳಿದಂತೆ ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ.ಮಾನವ ಜನ್ಮ ಶ್ರೇಷ್ಠವಾದುದು. ಅಂಗಾಂಗ ದಾನದ ಮೂಲಕ ಈ ಶ್ರೇಷ್ಠ ಜೀವವನ್ನು ಉಳಿಸಿದಂತಾಗುತ್ತದೆ ಎಂದರು.

18 ಅಂಗಾಂಗ ಮರುಪಡೆಯುವಿಕೆ ಕೇಂದ್ರ

ರಾಜ್ಯದಲ್ಲಿ ಪ್ರಸ್ತುತ 18 ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಿಮಾನ್ಸ್ ನಲ್ಲಿ ಮೆದುಳು ದಾನ ಹಾಗೂ ಹುಬ್ಬಳ್ಳಿ ಕಿಮ್ಸ್ ನಲ್ಲಿ ಮೂತ್ರಪಿಂಡ ದಾನಗಳನ್ನು ಮಾಡಬಹುದಾಗಿದೆ. ಇದು ಸರ್ಕಾರದ  ದೊಡ್ಡಸಾಧನೆ. ಅಂಗಾಂಗ ದಾನ ಮಾನವೀಯತೆ ಕೆಲಸ ಎಂದರು.ಮಾರ್ಕೋನಳ್ಳಿಯ ಕೃಷ್ಣಪ್ಪ, ನವೀನಕುಮಾರ್ ಇವರು ಅತ್ಯಂತ ಬಡಕುಟುಂಬದವರಾಗಿದ್ದು,  ಇವರ ಕುಟುಂಬದವರು ಮಗನನ್ನು ಅಪಘಾತದಲ್ಲಿ ಕಳೆದುಕೊಂಡಿದ್ದರೂ, ಅವರ ಅಂಗಾಂಗಗಳನ್ನು  ದಾನ ಮಾಡುವ ಮೂಲಕ ದೊಡ್ಡ ಗುಣವನ್ನು ಮೆರೆದಿದ್ದಾರೆ.ಇವರ ಉದಾತ್ತ ಗುಣವನ್ನು ಎಲ್ಲರಿಗೂ ಅನುಕರಣೀಯವಾದುದು ಎಂದರು.



Join Whatsapp