ನ್ಯೂಯಾರ್ಕ್ ನಗರ ಕೊಲೆಗಾರರ ವಿರುದ್ಧ ನಿಲ್ಲಲಿದೆ । ಪೊಲೀಸ್ ಅಧಿಕಾರಿಯ ಹತ್ಯೆಯ ಬಳಿಕ ಮೇಯರ್ ಹೇಳಿಕೆ

Prasthutha: January 22, 2022

ವಾಷಿಂಗ್ಟನ್: ಕೌಟುಂಬಿಕ ಹಿಂಸಾಚಾರವನ್ನು ನಿಭಾಯಿಸುತ್ತಿದ್ದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಹತ್ಯೆಯಾಗಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಪೊಲೀಸ್ ಅಧಿಕಾರಿ 22 ವರ್ಷ ಪ್ರಾಯದವರಾಗಿದ್ದು, ಗುರುತು ಪತ್ತೆಯಾಗಿಲ್ಲ. ಈ ಘಟನೆಯಲ್ಲಿ ಲಾಶಾನ್ ಮೆಕ್ನೀಲ್ ಎಂಬವರು ಗುಂಡು ತಗುಲಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್, ನಮ್ಮ ನಗರ ಕೊಲೆಗಾರರ ವಿರುದ್ಧ ನಿಲ್ಲಲಿದೆ. ಇದು ಕೇವಲ ಪೊಲೀಸ್ ಅಧಿಕಾರಿಗಳ ಮೇಲಿನ ದಾಳಿಯಲ್ಲ. ಇಡೀ ನ್ಯೂಯಾರ್ಕ್ ನಗರದ ಮೇಲಿನ ದಾಳಿಯಾಗಿದೆ ಎಂದು ಬಣ್ಣಿಸಿದ್ದಾರೆ.

ಇತ್ತೀಚೆಗೆ ನ್ಯೂಯಾರ್ಕ್ ನಗರದಲ್ಲಿ ಅಪರಾಧ ಕೃತ್ಯಗಳು ವ್ಯಾಪಕವಾಗುತ್ತಿದ್ದು, ಇದು ಒಂದು ವಾರದ ಅಂತರದಲ್ಲಿ ಪೊಲೀಸರನ್ನು ಗುರಿಯಾಗಿಸಿ ನಡೆದ ನಾಲ್ಕನೇ ದಾಳಿಯಾಗಿದೆ ಎಂದು ಹೇಳಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!