ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು, ಜಾತ್ಯತೀತವಾಗಿದ್ದರೆ ಮಾತ್ರ ಅಭಿವೃದ್ಧಿ: ಯತೀಂದ್ರ ಸಿದ್ದರಾಮಯ್ಯ

Prasthutha|

ದಾವಣಗೆರೆ: ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿಯಂಥ ಪಕ್ಷಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

- Advertisement -

ದಾವಣಗೆರೆ ತಾಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದು ರಾಷ್ಟ್ರ ಆಗಬಾರದು. ಹಿಂದು ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಜಾತ್ಯತೀತತೆಯಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಇದು ನಾನು ಹೇಳಿದ್ದಲ್ಲ, ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

“ನಮ್ಮ ದೇಶ ಹಿಂದು ರಾಷ್ಟ್ರವಾದರೆ ದೇಶಕ್ಕೆ ತೊಂದರೆ. ನಮ್ಮ ದೇಶವು, ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದ ರೀತಿ ಆಗುತ್ತೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ನಮ್ಮ ದೇಶ ಜಾತ್ಯತೀತವಾದ ದೇಶವಾಗಿದ್ದು, ಅದನ್ನು ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಆಗುವುದಿಲ್ಲ’’ ಎಂದು ಹೇಳಿದ್ದಾರೆ.

Join Whatsapp