Home ಟಾಪ್ ಸುದ್ದಿಗಳು ನಮ್ಮ ಕುಟುಂಬ, ರೇವಣ್ಣ ಕುಟುಂಬ ಬೇರೆ ಬೇರೆ: ಕುಮಾರಸ್ವಾಮಿ

ನಮ್ಮ ಕುಟುಂಬ, ರೇವಣ್ಣ ಕುಟುಂಬ ಬೇರೆ ಬೇರೆ: ಕುಮಾರಸ್ವಾಮಿ

ಶಿವಮೊಗ್ಗ: ನಮ್ಮ ಕುಟುಂಬವೇ ಬೇರೆ. ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್ಡ್ರೈವ್ ವಿಚಾರದಲ್ಲಿ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ಆಗಿದೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ತಾಕೀತು ಮಾಡಿದರು. ’ಕಾಂಗ್ರೆಸ್ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ತಪ್ಪು ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ‘ ಎಂದು ಹರಿಹಾಯ್ದರು.
’ನಮ್ಮ ಕುಟುಂಬವೇ ಬೇರೆ. ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ. ಇಲ್ಲಿ ಕುಟುಂಬದ ಹೆಸರು ತರಬೇಡಿ. ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ. ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿಕೊಳ್ಳಿ. ವ್ಯಕ್ತಿಗತವಾಗಿ ಒಬ್ಬೊಬ್ಬರದ್ದು ಒಂದೊಂದು ವರ್ತನೆ ಇರುತ್ತದೆ ಎಂದು ಹೇಳಿದರು.

Join Whatsapp
Exit mobile version