ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರಲ್ಲ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.

- Advertisement -


ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

Join Whatsapp
Exit mobile version