Home ಟಾಪ್ ಸುದ್ದಿಗಳು ಕಬ್ಬಿಗೆ ಬೆಂಬಲ ಬೆಲೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು: ಕುರುಬೂರು ಶಾಂತಕುಮಾರ್

ಕಬ್ಬಿಗೆ ಬೆಂಬಲ ಬೆಲೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು: ಕುರುಬೂರು ಶಾಂತಕುಮಾರ್

 

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಿಂದ ಕಬ್ಬು ಬೆಳೆಗಾರರು ಬಂದಿದ್ದೇವೆ. ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕಬ್ಬಿಗೆ ಬೆಂಬಲ‌ ಬೆಲೆ ನೀಡುವವರೆಗೂ ನಮ್ಮ ಹೋರಾಟ ನಡೆಸುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕಬ್ಬಿಗೆ FRP ದರ ಮರುಪರಿಶೀಲನೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ಕಬ್ಬಿಗೆ ಬೆಂಬಲ‌ ಬೆಲೆ ನೀಡುವವರೆಗೂ ನಮ್ಮ ಹೋರಾಟ ನಡೆಸುತ್ತೇವೆ.ಕೇಂದ್ರದಿಂದ ಉತ್ತರ ಪ್ರದೇಶದಲ್ಲಿ ರೈತರ ಮಾರಣಹೋಮ ಆಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸುವವರೆಗೆ ಇಲ್ಲಿಂದ ಹೋಗಲ್ಲ ಎಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ನಿರತ ರೈತರು ಪಟ್ಟು ಹಿಡಿದಿದ್ದಾರೆ. ಕಬ್ಬಿಗೆ ಎಫ್​ಆರ್​ಪಿ ದರ ಮರುಪರಿಶೀಲಿಸಲು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಫ್ರೀಡಂಪಾರ್ಕ್‌ನಿಂದ ಧರಣಿನಿರತ ರೈತರು ರಸ್ತೆಯತ್ತ ನುಗ್ಗಿ ಪ್ರತಿಭಟಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ. ಎಫ್ಆ​ರ್​ಪಿ FRP ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ. ನಮ್ಮ ಅಧೀನದಲ್ಲಿ ಬಂದರೆ ಆ ಬಗ್ಗೆ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಬಳಿಕ ಮಾತನಾಡಿದ ಕುರುಬೂರು ಶಾಂತಕುಮಾರ್, ಕಬ್ಬಿಗೆ FRP ದರ ಮರುಪರಿಶೀಲಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸಚಿವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆಯನ್ನು ಆಲಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ರೈತರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರೈತ ಮುಖಂಡರು ಸಿಎಂ ಬೊಮ್ಮಾಯಿ ಭೇಟಿಗೆ ತೆರಳಿದ್ದು, ಗೃಹಕಚೇರಿ ಕೃಷ್ಣಾದಲ್ಲಿ ರೈತ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಕುರುಬೂರು ಶಾಂತಕುಮಾರ್ ಹಾಗೂ ಇತರ ಮುಖಂಡರಿಂದ ಸಿಎಂ ಭೇಟಿ ಮಾಡಿ ರೈತರ ಬೇಡಿಕೆಗಳ ಬಗ್ಗೆ ಮುಖಂಡರು ಮನವಿ ಸಲ್ಲಿಸಿದ್ದಾರೆ.

Join Whatsapp
Exit mobile version