Home ಟಾಪ್ ಸುದ್ದಿಗಳು ನಮ್ಮ ಗ್ಯಾರಂಟಿ ಯೋಜನೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಮ್ಮ ಗ್ಯಾರಂಟಿ ಯೋಜನೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮದು ಬೋಗಸ್ ಭರವಸೆಗಳಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ನಗರದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನುಡಿದಂತೆ ನಡೆದಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಹೇಳಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾರು ಬಡವರ ಬಗ್ಗೆ ಚಿಂತನೆ ಮಾಡುತ್ತಾರೋ, ಅವರು ಕಾರ್ಯಕ್ರಮದ ಜೊತೆಗೆ ದುಡ್ಡನ್ನು ಕೂಡ ಹೊಂದಿಕೆ ಮಾಡುತ್ತಾರೆ. ಈ ಕೆಲಸವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾಡುತ್ತಿದ್ದಾರೆ ಎಂದರು.


ಬಿಜೆಪಿ ಸರ್ಕಾರ ಬಡವರಿಗೆ ಯಾವುದೇ ಯೋಜನೆ ಜಾರಿ ಮಾಡಲಿಲ್ಲ. ಯೋಜನೆಗಳ ಕುರಿತಾಗಿ ನಾವು ಪಾರ್ಲಿಮೆಂಟ್ನಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಇದೀಗ ಎಲ್ಲ ಕಡೆ ಮೋದಿ ಕರ್ನಾಟಕದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

Join Whatsapp
Exit mobile version