Home ಟಾಪ್ ಸುದ್ದಿಗಳು ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ: ಸಿಎಂ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ: ಸಿಎಂ ಸಿದ್ದರಾಮಯ್ಯ

ಕೋಲಾರ: ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಸ್ವ-ಪಕ್ಷದ ಶಾಸಕರು ಸೇರಿದಂತೆ ಬಿಜೆಪಿ, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಹೇಳಿತ್ತು. ಆದರೆ, ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು, ಲೋಕಸಭಾ ಚುನಾವಣೆಯ ನಂತರವೂ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ‘ಅಧಿಕೃತವಾಗಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ, ನಾವು ಕೂಡ ಅವರ ಪರವಾಗಿ ಮನವಿ ಮಾಡ್ತೀವಿ, ನೀವು ಮತಗಟ್ಟೆಗೆ ತೆರಳಿ ಹಸ್ತದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡುತ್ತೇವೆ. ನಾವು ಸುಮ್ಮನೆ ಮತ ಕೇಳುತ್ತಿಲ್ಲ, ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

Join Whatsapp
Exit mobile version