ಮೋದಿಯನ್ನು ಅಧಿಕಾರದಿಂದ ಇಳಿಸುವುದೇ ನಮ್ಮ ಮುಂದಿನ ಗುರಿ: ಖರ್ಗೆ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

- Advertisement -


ಮೋದಿಯನ್ನು ಅಧಿಕಾರದಿಂದ ಇಳಿಸುವುದೇ ನಮ್ಮ ಮುಂದಿನ ಗುರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಪ್ರಣಾಳಿಕೆ ಬಿಡುಗಡೆಯ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಮಾಧ್ಯಮ ಸಂಸ್ಥೆಗಳನ್ನ ನಿಯಂತ್ರಿಸಲಾಗುತ್ತಿದೆ. ಹೀಗಾಗಿ ಮೋದಿಯನ್ನ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ. ಆದರೆ ನಮಗೆ ಯಾವುದೇ ಭಯವಿಲ್ಲ ಎಂದರು.



Join Whatsapp