2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ: ಟಿಎಂಸಿ

Prasthutha|

ಕೋಲ್ಕತ:  2024ರಲ್ಲಿ ದೆಹಲಿಯಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಹೋದರ ಟಿಎಂಸಿ ನಾಯಕ ಕಾರ್ತಿಕ್‌ ಬ್ಯಾನರ್ಜಿ ತಿಳಿಸಿದ್ದಾರೆ.

- Advertisement -

ಭವಾನಿಪುರ ಉಪಚುನಾವಣೆ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯಿಸಿರುವ ಕಾರ್ತಿಕ್‌, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್‌ ವಿರುದ್ಧ 58 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು.

Join Whatsapp